ರಾಜೀನಾಮೆ ನೀಡೋ ಮೂಲಕ ಮೈತ್ರಿ ಸರಕಾರ ಅಸ್ತಿರಗೊಳಿಸಲು ಯತ್ನಿಸಿರುವ ಕಾಂಗ್ರೆಸ್ ಶಾಸಕರು ಕೂಡಲೇ ರಾಜೀನಾಮೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕಾಗುತ್ತದೆ ಎಂದು ಕೈ ಪಡೆ ಖಡಕ್ ವಾರ್ನಿಂಗ್ ನೀಡಿದೆ.ಕಾಂಗ್ರೆಸ್ ನ ಶಾಸಕರು ರಾಜೀನಾಮೆ ನೀಡಿದ್ದಾರೆ. ಆ ಶಾಸಕರನ್ನು ಅನರ್ಹಗೊಳಿಸಬೇಕೆಂದು ಸಭಾಧ್ಯಕ್ಷರಿಗೆ ದೂರು ಕೊಡಲು ಕಾಂಗ್ರೆಸ್ ಸಜ್ಜಾಗಿದೆ.ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ಕಾಂಗ್ರೆಸ್ ನ