3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷ ಬೆಂಬಲ

ಬೆಂಗಳೂರು| pavithra| Last Modified ಬುಧವಾರ, 20 ಜನವರಿ 2021 (10:36 IST)
ಬೆಂಗಳೂರು : 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಕೈಜೋಡಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ರೈತರು ಈ ದೇಶಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ. ರೈತರನ್ನು ಉಳಿಸಿ, ಬೆಳೆಸುವ ಕೆಲಸನಾವು ಮಾಡಬೇಕಾಗಿದೆ. ಇಂದು ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪೊಲೀಸರ ಮೂಲಕ ನಮ್ಮನ್ನು ಬೆದರಿಸುವ ಪ್ರಯತ್ನ ನಡೆಯಲಿದೆ. ಇದ್ಯಾವುದಕ್ಕೂ ನಾವು ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಕೈ ನಾಯಕರಿಗೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಶ್ನೆ ವಿಚಾರದ ಬಗ್ಗೆ ಮಾತನಾಡಿದ ಅವರು,  ಜೆ.ಪಿ.ನಡ್ಡಾ ಗೆ ಮಾತನಾಡುವ ಶಕ್ತಿ ಕೊಟ್ಟಿದ್ದೇ ಕಾಂಗ್ರೆಸ್. ಇದು ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ರೈತರ ಹೋರಾಟ. ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲಿಯೇ ಪ್ರತಿಭಟನೆ ಅದೇ ಸ್ಥಳದಲ್ಲಿ ಮಲಗಿ ಪ್ರತಿಭಟನೆ ನಡೆಸಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :