ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಬೆಂಬಲಿಗರಿಗೆ ಗೇಟ್ಪಾಸ್ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ತಿರುಗೇಟು ನೀಡಿದೆ. ಶ್ರೀನಿವಾಸ್ ಪ್ರಸಾದ್ ಅವರ ಕಟ್ಟಾ ಬೆಂಬಲಿಗರಾದ ನಂಜನಗೂಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ ಹಾಗೂ ಹಲ್ಲಹಳ್ಳಿಯ ಕಾಂಗ್ರೆಸ್ ಅಧ್ಯಕ್ಷ ಮಹಾದೇವಪ್ಪ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆಂದು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆಗೊಳಿಸಲಾಗಿದೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.