ಜೆಡಿಎಸ್ ಬಂಡಾಯ ಶಾಸಕರಿಗೆ ಹೈಕಮಾಂಡ್ ತೀರ್ಮಾನದಂತೆ ಟಿಕೆಟ್ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಶಾಸಕ ಚಲುವರಾಯಸ್ವಾಮಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಂಡಾಯ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಹೈಕಮಾಂಡ್ ಭರವಸೆ ನೀಡಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಜಾತಿ, ಮತ ಹಾಗೂ ಧರ್ಮಗಳನ್ನು ಎತ್ತಿಕಟ್ಟಿ ಚುನಾವಣೆಯಲ್ಲಿ ಗೆಲ್ಲಲು ಷಡ್ಯಂತ್ರ ನಡೆಸಿದೆ ಎಂದಿದ್ದಾರೆ. ತಾಜಾ