ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೇ ಕಾಂಗ್ರೆಸ್ ಈ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದೆ.ಇದುವರೆಗೆ ಪರಸ್ಪರ ಶೀತಲ ಸಮರ ನಡೆಸುತ್ತಿದ್ದ ಡಿಕೆ ಶಿವಕುಮಾರ್-ಸಿದ್ದರಾಮಯ್ಯ ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೇ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಈ ವಿಚಾರವಾಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ವಿರುದ್ಧ ಹೋರಾಡಲು ಪ್ರಮುಖ ಅಸ್ತ್ರವಾಗಲಿದೆ.ಇನ್ನು, ಯುವ ಕಾಂಗ್ರೆಸ್ ಈಗಾಗಲೇ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದೆ.