ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದೆ. ಜನಬಲ ಇಲ್ಲದಿರುವ ಕಾರಣ ಹಣದ ಮುಖಾಂತರವೇ ಚುನಾವಣೆ ಗೆಲ್ಲಬೇಕೆಂದು ಹುನ್ನಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಆನೇಕಲ್ನ ಅತ್ತಿಬೆಲೆಯಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಹಣವಿರುವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿ, ಹಣ ಖರ್ಚು ಮಾಡಿ ಜೊತೆಗೆ ಪಕ್ಷಕ್ಕೂ ನೀಡಿ, ಯಾವುದೇ ಮಾರ್ಗ ಅನುಸರಿಸಿ ಚುನಾವಣೆ ಗೆಲ್ಲಬೇಕೆನ್ನುವ ಅವರ ಚಿಂತೆನೆ