ತುಮಕೂರು : ಕಾಂಗ್ರೆಸ್ ಕಾಲದಲ್ಲಿ ರಕ್ಷಣಾ ವ್ಯವಸ್ಥೆ ಹದಗೆಟ್ಟಿತ್ತು. ಅವರ ಕಾಲದಲ್ಲಿ ಎಲ್ಲವೂ ಲೂಟಿ ಆಗಿತ್ತು. ಅವರದ್ದು 85 ಪರ್ಸೆಂಟ್ ಕಮಿಷನ್ ಸರ್ಕಾರ ಆಗಿತ್ತು. ಎಚ್ಎಎಲ್ ನಿರ್ನಾಮ ಮಾಡಲಾಗಿತ್ತು. ಕಾಂಗ್ರೆಸ್ ನಾಯಕರ ಬಾಯಿಯಲ್ಲಿ ಎಚ್ಎಎಲ್ ಹೆಸರು ಬರುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ತುಮಕೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಧುನಿಕ ರಕ್ಷಣಾ ವ್ಯವಸ್ಥೆ ಒದಗಿಸಿದೆ. ಕಾಂಗ್ರೆಸ್ – ಜೆಡಿಎಸ್ ಹಲವು ಕಾಮಗಾರಿ ನಿಲ್ಲಿಸಲು ಪ್ರಯತ್ನಿಸಿತ್ತು.