ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಇದೀಗ ರಾಜ್ಯದಲ್ಲೂ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದಿಂದಾಗಿ ರಾಜ್ಯದ ಜನತೆ ಬೇಸತ್ತಿದ್ದು, ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು. ಸರಕಾರ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲೂ ವಿಫಲವಾಗಿದೆ. ಕೇಂದ್ರ ಸರಕಾರದಿಂದ ಬಂದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಇಂತಹ ಸರಕಾರಕ್ಕೆ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.