ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಬಲಾಢ್ಯ ಕೋಟೆಯಾಗಿದ್ದರಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯರ ಜನಪರ ಕಾರ್ಯಗಳಿಂದಾಗಿ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮಣೆಹಾಕಲಿದ್ದಾರೆ ಎನ್ನುವ ವಿಶ್ವಾಸವಿದೆ. ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಪರ ಅನುಕಂಪದ ಅಲೆಯಿದೆ ಎಂದು ತಿಳಿಸಿದ್ದಾರೆ. ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕಳಲೆ