ಬೆಂಗಳೂರು : ಕಾಂಗ್ರೆಸ್ನವರಿಗೆ ಬಹುಮತ ಬರಲ್ಲ. ಹೀಗಾಗಿ ಬೇರೆ ಪಕ್ಷದವರ ಜೊತೆ ಮಾತನಾಡುವ ಪ್ರಯತ್ನ ಪಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಅವರಿಗೆ ಬಹುಮತವೂ ಬರುವುದಿಲ್ಲ ಎಂದು ಟಾಂಗ್ ಕೊಟ್ಟರು. ನಾವು ಗೆಲ್ಲುವ ವಿಶ್ವಾಸ ಇದೆ. ನಾವು ಬಹುಮತದ ಗಡಿ ದಾಟುತ್ತೇವೆ. ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು