ಇಂಧ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೈವಾಡವಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಗಾಂಧಿ ಪ್ರತಿಮೆ ಬಳಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಮೋದಿ ಹಟಾವೋ ಭಾರತ್ ಬಚಾವೋ ಎನ್ನುವ ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವ ಕೇಂದ್ರ ಸರಕಾರಕ್ಕೆ ಧಿಕ್ಕಾರ