ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಚಲೋ ಪ್ರತಿಭಟನೆಯನ್ನು ಕೈಗೊಂಡಿದ್ದು, ಈ ಕುರಿತು ರಾಜ್ಯ ಕಾಂಗ್ರೆಸ್ ಟ್ವೀಟರ್ ನಲ್ಲಿ ಸಿಎಂ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ. ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ರಸ್ತೆ ಬದಿಯಲ್ಲಿ ಮಲಗಿ ಧರಣಿ ನಡೆಸುತ್ತಿದ್ದಾರೆ. ಯಾವುದೇ ಸೌಕರ್ಯವಿಲ್ಲದೆ ಪರದಾಡುತ್ತಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಸರ್ಕಾರಿ ಅಧಿಕಾರಿಯಾಗಲಿ, ಮುಖಂಡರಾಗಲಿ ಅವರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಲಿಲ್ಲ.