ಚಿಕ್ಕಮಗಳೂರು : ರಾಜ್ಯ ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮದೇ ಸರ್ಕಾರದ ಆದೇಶವನ್ನು ಸರಿ-ತಪ್ಪು ಎಂದು ವ್ಯಾಖ್ಯಾನ ಮಾಡೋಕಾಗಲ್ಲ. ಓಮಿಕ್ರಾನ್ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ.ಆಕಸ್ಮಾತ ಓಮಿಕ್ರಾನ್ ಬಂದರು ಕೂಡಾ ಸೌಮ್ಯ ಪರಿಣಾಮ ಬೀರುತ್ತದೆ ಎಂದು ಬೇರೆ ಬೇರೆ ವೈರಾಲಜಿ ವಿಜ್ಞಾನಿಗಳು ಹೇಳಿದ್ದಾರೆ ಎಂದರು. ಸರ್ಕಾರ