ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್ಟೇಬಲ್ ಮೇಲೆ ಮತ್ತೊಂದು ಕಾರು ಹರಿದು ಅವರು ದುರಂತ ಅಂತ್ಯಕಂಡ ಘಟನೆ ಇಂದು ಬೆಳಗಿನ ಜಾವ ದೇವನಹಳ್ಳಿ ಹೈವೇಯ ಚಿಕ್ಕಜಾಲ ಬಳಿ ನಡೆದಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಸುರೇಶ್ ಮೃತ ಕಾನ್ಸ್ಟೇಬಲ್. ದೇವನಹಳ್ಳಿ ಇನ್ಸ್ಪೆಕ್ಟರ್ ಧರ್ಮೇಗೌಡ ಮತ್ತು ಅವರ ಜೀಪ್ ಚಾಲಕ ಸುರೇಶ್ ಚಿಕ್ಕಜಾಲ ಬಳಿ ಬಂದಾಗ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಕಂಡು ಪರಿಶೀಲನೆಗೆ ಮುಂದಾಗಿದ್ದಾರೆ.