ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಖೋನಿ ನಾಲಾದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಸಣ್ಣ ಭಾಗ ಕುಸಿದಿದೆ. ನಿನ್ನೆ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 4 ಜನರು ಗಾಯಗೊಂಡಿದ್ದಾರೆ.. ಅವಶೇಷಗಳಡಿ ಸಾಕಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಭಾರತೀಯ ಸೇನೆ , ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ರು.. ರಕ್ಷಣಾ ಕಾರ್ಯಾಚರಣೆ ವೇಳೆಕಲ್ಲುಗಳು ದೊರೆತಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು..ಇನ್ನು ಅವಶೇಷಗಳ ಅಡಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕನಿಷ್ಠ 10 ಮಂದಿ ಇನ್ನೂ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ..ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು , ನಾಗರಿಕ ಆಡಳಿತ & ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಗಾ ವಹಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.