ಬಹುನಿರೀಕ್ಷಿತ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಇಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಭೂಮಿಪೂಜೆ ನೆರವೇರಿಸಿದರು. ಯಲಹಂಕ ವಿಧಾನಸಭಾ ಕ್ಷೇತ್ರದ 17 ಗ್ರಾಮಗಳ 3546 ಎಕರೆ ಪ್ರದೇಶದಲ್ಲಿ ಸುಮಾರು 22 ಸಾವಿರ ನಿವೇಶನಗಳನ್ನು ನಿರ್ಮಾಣ ಮಾಡಿ ರೈತರು ಮತ್ತು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಗುರಿಯೊಂದಿಗೆ ರಾಜ್ಯ ಸರ್ಕಾರ ಮತ್ತು ಬಿಡಿಎದ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ದೊರೆತಂತಾಗಿದೆ. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ವಿಶ್ವನಾಥ್ ಅವರು,