ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಾಡಿದ್ದು, ಈ ಪೈಕಿ ಇಂದು ಮಹದೇವಪುರ ವಿಭಾಗದ ಹೂಡಿ, ಟಿಝಡ್ ಅಪಾರ್ಟ್ಮ್ಂಟ್ ಹಾಗೂ ಕೆ.ಆರ್.ಪುರ ವಿಭಾಗದ ಗಾಯತ್ರಿ ಲೇಔಟ್ ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಮಹದೇವಪುರ ವಿಭಾಗ ವೈಟ್ ಫೀಲ್ಡ್ ಉಪ ವಿಭಾಗದಲ್ಲಿ ಬರುವ ಟಿ.ಝಡ್ ಅಪಾರ್ಟ್ಮ್ಂಟ್ ನ 70 ಮೀಟರ್ ಉದ್ದದ ಕಾಂಪೌಂಡ್ ಗೋಡೆ ಹಾಗೂ ಭದ್ರತಾ ಸಿಬ್ಬಂದಿಯ ಕೊಠಡಿಯನ್ನು ತೆರವುಗೊಳಿಸಲಾಗಿದೆ.