ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕೆಲವೆಡೆ ಮನೆಗಳು ಜಲಾವೃತವಾಗಿವೆ. ಒಟ್ಟು 27 ಜಿಲ್ಲೆಗಳಲ್ಲಿ ಶಾಲೆಗಳಿಗೆ ಮಳೆಯಿಂದಾಗಿ ರಜೆ ಘೋಷಿಸಲಾಗಿದೆ. ಚೆನ್ನೈ, ಚೆಂಗಲ್ಪೇಟ್, ಕಾಂಚೀಪುರಂ, ತಿರುವಳ್ಳೂರು ಮತ್ತು ವಿಲ್ಲುಪುರಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶ್ರೀಲಂಕಾ ಕರಾವಳಿ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರಭಾವದಿಂದ ಚೆನ್ನೈನ ಹಲವಾರು ಭಾಗಗಳು ಮತ್ತು ನೆರೆಯ ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರ್ನಲ್ಲಿ ಭಾರೀ ಮಳೆಯಾಗುತ್ತಿದೆ. ಇತ್ತೀಚಿನ ಮುನ್ಸೂಚನೆಯ ಪ್ರಕಾರ, ನೀಲಗಿರಿ, ಕೊಯಮತ್ತೂರು,ಕಡಲೂರು,