ರಾಜ್ಯಾಧ್ಯನಂತ ಮುಂದಿನ ಮೂರು ದಿನಗಳ ಕಾಲ ಮಹಾ ಮಳೆ ಮುಂದುವರೆದಿದೆ.ನಿಲ್ಲದ ಮಹಾ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.ವರುಣಾರ್ಭಟಕ್ಕೆ ಕರುನಾಡು ತತ್ತರಿಸಿದೆ. ಇಂದು 11 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದೂ ಕೂಡ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗಲಿದೆ.ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.