ಶ್ರೀಗಳಿಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ; ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ

ಉಡುಪಿ| pavithra| Last Modified ಶನಿವಾರ, 21 ಡಿಸೆಂಬರ್ 2019 (11:23 IST)
ಉಡುಪಿ : ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ  ಶ್ರೀಗಳಿಗೆ ಇಂದೂ ಕೂಡ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದೂವರಿಸಲಾಗಿದೆ.


ಪೇಜಾವರ ಶ್ರೀಗಳಿಗೆ ನಿನ್ನೆ ಮುಂಜಾನೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ  ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿತ್ತು. ಇದೀಗ ಐಸಿಯುನಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಲಾಗಿದ್ದು, ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

 

ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ಫೋನ್ ಮಾಡಿ ಶ್ರೀಗಳ ವಿಚಾರಿಸಿದ್ದಾರೆ ಎನ್ನಲಾಗಿದೆ. ಹಾಗೇ ನಾಳೆ ಸಿಎಂ ಯಡಿಯೂರಪ್ಪ ಅವರು ಉಡುಪಿಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ ಎನ್ನಲಾಗಿದೆ.

 
ಇದರಲ್ಲಿ ಇನ್ನಷ್ಟು ಓದಿ :