ಬೆಂಗಳೂರು : ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಲಂಚ ಬೇಡಿಕೆ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯ ಗುತ್ತಿಗೆದಾರೊಬ್ಬರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಕುಮಾರಸ್ವಾಮಿ,ರಾಜ್ಯ ಸರ್ಕಾರದಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರಕ್ಕೆ ಬಂದಿರುವುದೇ ಕಮಿಷನ್ ವಿಚಾರ. ಈಗ ಹೊರಗೆ ಬರುತ್ತಿರುವ