ರಾಜಧಾನಿ ಬೆಂಗಳೂರಿನ ಮೆಟ್ರೋಪಾಲಿಟನ್ ಪ್ರದೇಶ ವಲಯದಲ್ಲಿನ ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಜಿಟಲ್ ಮೀಟರ್ ಗೆ ಬದಲಿಸುವ ಕಾರ್ಯ ನಡೆಯುತ್ತಿದೆ. ಈತನಕ ಒಟ್ಟು 6,22,418 ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಸ್ಟಾಟಿಕ್ ಡಿಜಿಟಲ್ ಮೀಟರ್ ಗೆ ಬದಲಾಯಿಸಲಾಗಿದೆ. ಹತ್ತು ವರ್ಷಗಳ ಹಿಂದೆ ಅಳವಡಿಸಿರುವ ಎಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಡಿಜಿಟಲ್ ಮಾಪನಗಳಿಗೆ ಬದಲಾಯಿಸುವ ಕಾರ್ಯ ಇದೇ ಜುಲೈ ತಿಂಗಳಲ್ಲಿ ಆರಂಭಗೊಂಡಿತ್ತು. ಅಕ್ಟೋಬರ್ 17ರ ತನಕ ನಗರದಲ್ಲಿ 2,85,941