ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್ ಮೊಬೈಲ್’ ನೀರು ಸಂಸ್ಕರಣೆ ಯಂತ್ರದ ಪ್ರಾತ್ಯಕ್ಷಿಕೆಯನ್ನು ಬೊಮ್ಮನಹಳ್ಳಿಯಲ್ಲಿ ನಡೆಸಲಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಈ ಯಂತ್ರದ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ಕೊಳವೆಯ ಮೂಲಕ ಚರಂಡಿ ನೀರನ್ನು ಹೀರಿಕೊಳ್ಳುವ ಯಂತ್ರವು, ನಾಲ್ಕು ಹಂತದ ಸಂಸ್ಕರಣೆಯಲ್ಲಿ ಬಳಕೆಗೆ ಯೋಗ್ಯವಲ್ಲದ ಚರಂಡಿಯ ನೀರನ್ನು ಸ್ಥಳದಲ್ಲೇ ಶುದ್ಧ ಕುಡಿಯುವ ನೀರನ್ನಾಗಿ ಪರಿವರ್ತಿಸುತ್ತದೆ. ಕಿರಿದಾದ ಪ್ರದೇಶಗಳಿಗೂ ಕೊಂಡೊಯ್ಯಬಹುದಾದ ಚಿಕ್ಕ ವಾಹನದಲ್ಲಿ ಯಂತ್ರವನ್ನು