ರಾಜ್ಯದಲ್ಲಿ 1990 ಕೊರೊನಾ ಸೋಂಕು ಪ್ರಕರಣ ಪತ್ತೆ. 45 ಸೋಂಕಿತರು ಸಾವು

bangalore| geethanjali| Last Modified ಬುಧವಾರ, 14 ಜುಲೈ 2021 (19:51 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1990 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 45 ಮಂದಿ ಮೃತಪಟ್ಟಿದ್ದಾರೆ. ನಿನ್ನೆಗೆ ಹೋಲಿಸಿದರೆ ಕೊರೊನಾ ಅಬ್ಬರ ಏರಿಕೆ ಕಂಡು ಬಂದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 490 ಸೋಂಕು ಪ್ರಕರಣಗಳು ಕಂಡು ಬಂದರೆ 8 ಮಂದಿ ಅಸುನೀಗಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 2537 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,06,933ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 28,76,587ಕ್ಕೆ ಜಿಗಿತ ಕಂಡಿದ್ದು, ಸಾವಿನ ಸಂಖ್ಯೆ 35,989ಕ್ಕೆ ತಲುಪಿದೆ. ಇದರಿಂದ 33,642 ಸಕ್ರಿಯ ಪ್ರಕರಣಗಳಿಗೆ ಇಳಿದಿದೆ.


ಇದರಲ್ಲಿ ಇನ್ನಷ್ಟು ಓದಿ :