ಕರ್ನಾಟಕದಲ್ಲಿ ಕೊರೊನಾ ವೈರಸ್ ಮಹಾಸ್ಫೋಟಗೊಂಡಿದೆ. ಒಂದೇ ದಿನದಲ್ಲಿ 8,818 ಜನರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇನ್ನು ಬೆಂಗಳೂರಿನಲ್ಲಿಯೂ ವೈರಸ್ ವ್ಯಾಪಕವಾಗಿ ಹರಡುತ್ತಿದೆ. 3495 ಜನರಲ್ಲಿ ಮಹಾಮಾರಿ ಪತ್ತೆಯಾಗಿದೆ. ದಾಖಲೆ ಪ್ರಮಾಣದಲ್ಲಿ ಡೆಡ್ಲಿ ವೈರಸ್ ಪತ್ತೆಯಾಗುತ್ತಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ.