ಕೊರೊನಾ ವೈರಸ್ ಕೇಸ್ ಹೆಚ್ಚಾದ ಪರಿಣಾಮ ಜಿಲ್ಲಾ ಕೇಂದ್ರದ ನಗರವನ್ನೇ ಡಿಸಿವೊಬ್ಬರು ಸೀಲ್ ಡೌನ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.ಹೊಸದಾಗಿ ಮೂರು ಕೊರೊನಾ ಕೇಸ್ ದೃಢವಾದ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ, 17 ನೇ ವಾರ್ಡಿನಲ್ಲಿ ಕೊರೊನಾ ಗೆ ಮೃತನಾದ ವೃದ್ಧನ ಕೊನೆಯ ಮಗ