ಕೊವೀಡ್ -19 ಅನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಆಗಿರುವುದರಿಂದ 25 ಸಾವಿರ ಕುಟುಂಬಗಳಿಗೆ ಪ್ರತಿದಿನ ತಲಾ 1 ಲೀಟರ್ ಹಾಲು ವಿತರಣೆ ಮಾಡಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲಿರುವ 11 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ 129 ಕೊಳಚೆ ಪ್ರದೇಶದ 25,000 ಕುಟಂಬಗಳಿಗೆ ತಲಾ 1 ಲೀ. ಹಾಲು ವಿತರಣೆ ಮಾಡಲಾಗುತ್ತಿದೆ. ಕೊಳಚೆ ಪ್ರದೇಶದಲ್ಲಿನ ಮನೆಗಳಿಗಳಿಗೆ ಸರ್ಕಾರದ ಆದೇಶದನ್ವಯ ಪ್ರತಿ ಮನೆಗೆ ಒಂದು ಲೀಟರ್ ಹಾಲನ್ನು ತುಮೂಲ್ ಮೂಲಕ ಒದಗಿಸಲಾಗುತ್ತಿದ್ದು, ಹಾಲು ವಿತರಣೆಯನ್ನು ಸಮರ್ಪಕವಾಗಿ