ಕೋವಿಡ್-19 ಹರಡದಂತೆ 21 ದಿನಗಳ ಕಾಲ ಮನೆಯಿಂದ ಹೊರಬರದಂತೆ ಸಾರ್ವಜನಿಕರಿಗೆ ತಿಳಿಸಲಾಗಿರೋದ್ರಿಂದ ಜನರ ಮನೆ ಬಾಗಿಲಿಗೇ ಇದೀಗ ಕಿರಾಣಿ ವಸ್ತುಗಳು ಬರುತ್ತಿವೆ. ರಾಮನಗರದ ಚನ್ನಪಟ್ಟಣ ತಾಲ್ಲೂಕಿನ ಚಕ್ಕರೆ ಗ್ರಾಮ ಪಂಚಾಯಿತಿಯಿಂದ ಮನೆ ಬಾಗಿಲಿಗೆ ಅಡುಗೆ ಸಾಮಗ್ರಿಗಳನ್ನು ತಲುಪಿಸಲು ಪ್ರಯತ್ನ ನಡೆಸಲಾಗುತ್ತಿದೆ.ಗ್ರಾಮದಲ್ಲಿ ಪಡಿತರ ಅಂಗಡಿಗಳಿಂದ ನೀಡಲಾಗುವ ಅಕ್ಕಿ ಮತ್ತು ರಾಗಿಯನ್ನು ನೀಡಲಾಗುತ್ತದೆ. ಮಿತವ್ಯಯವಾಗಿ ಸಾಮಾನ್ಯವಾಗಿ ಅಡುಗೆ ಮಾಡಿಕೊಂಡು ಜೀವನ ನಡೆಸಲು ಬೇಕಿರುವ ಅಗತ್ಯ ವಸ್ತುಗಳನ್ನು ಪಟ್ಟಿ ಮಾಡಿಕೊಳ್ಳಲಾಗಿದೆ. ಗ್ರಾಮದಲ್ಲಿ ಮೊದಲ ಆದ್ಯತೆಯ