ಕೊರೊನಾ ವೈರಸ್ ಹರಡುರಿಕೆ ತಡೆಗಟ್ಟುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರಿಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಬೆಂಗಳೂರಿನ ಮುಖ್ಯದ್ವಾರವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿ ನೆಲಮಂಗಲ ತಾಲೂಕಿನ ಹಳೇ ನಿಜಗಲ್ಲು ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಬೇರೆ ಜಿಲ್ಲೆಗಳಿಂದ ಬರುವ ವಾಹನಗಳನ್ನು ನಿಷೇಧಿಸಿ ವಾಹನಗಳನ್ನು ವಾಪಸ್ಸು ಕಳುಹಿಸಲಾಗುತ್ತಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಇರುವ ಕಾರಣ ನೆಲಮಂಗಲ ಉಪ ವಿಭಾಗ ಪೋಲೀಸರಿಂದ ಜಿಲ್ಲೆಯ ನೆಲಮಂಗಲ ಗಡಿಯಲ್ಲಿ ವಾಹನಗಳನ್ನು ನಿಷೇಧಿಸಿ ಕಠಿಣ ಕ್ರಮ