ಮಾಜಿ ಸಿಎಂಗೆ ಕೊರೊನಾ ಟೆನ್ಶನ್ ಶುರುವಾಗಿದೆ. ವಿಧಾನ ಸಭೆ ಕಲಾಪ ಒಂದೆಡೆ ಆರಂಭಗೊಂಡಿದ್ದರೆ, ಮತ್ತೊಂದೆಡೆ ಶಾಸಕರಿಗೆ ಕೊರೊನಾ ಭೀತಿ ಶುರುವಾಗಿದೆ.ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ರೆಸಾರ್ಟ್ನಲ್ಲೇ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ.ಹಾಸನ ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್ ನೇತೃತ್ವದ ತಂಡದವರು ಹೆಚ್.ಡಿ.ಕುಮಾರಸ್ವಾಮಿಯವರ ಗಂಟಲು ದ್ರವ ಪರೀಕ್ಷೆ ಮಾಡಿದ್ದಾರೆ.ವೈದ್ಯಕೀಯ ಕೊರೊನಾ ವರದಿ ಬಂದ ಬಳಿಕ ಹೆಚ್.ಡಿ.ಕೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.