ಬೆಂಗಳೂರು : ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವ ಆಂಧ್ರಪ್ರದೇಶದ ಮೂಲದ ಟೆಕ್ಕಿಗೆ ಕೊರೊನಾ ವೈರಸ್ ತಗಲಿರುವುದಾಗಿ ತಿಳಿದುಬಂದಿದೆ. ದುಬೈನಿಂದ ಬಂದ ಟೆಕ್ಕಿ 2 ದಿನ ಬೆಂಗಳೂರಿನ ಪಿಜಿಯಲ್ಲಿದ್ದ. ಬಳಿಕ ಬಸ್ ನಲ್ಲಿ ಹೈದರಾಬಾದ್ ಗೆ ತೆರಳಿದ್ದ ವೇಳೆ ಆತನಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆ ಅಪೋಲೊದಲ್ಲಿ ಪರಿಶೀಲಿಸಿದಾಗ ಸೋಂಕು ಪತ್ತೆಯಾಗಿತ್ತು. ಬಳಿಕ ಆತನನ್ನು ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೀಗ ಮುನ್ನೇಚ್ಚರಿಕೆ ಕ್ರಮವಾಗಿ ಆತನ ಜತೆ ಪ್ರಯಾಣಿಸಿದ್ದ ಪ್ರಯಾಣಿಕರನ್ನು ಪತ್ತೆ ಮಾಡಿದ್ದು, ಅವರಿಗೆ