ಚಿಕನ್, ಮಟನ್, ಮೀನು ಮಾರಾಟ ಮಾಡುತ್ತಿದ್ದವರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಕೃಷ್ಣರಾಜಪೇಟೆ ಪುರಸಭೆಯ ವ್ಯಾಪ್ತಿಯಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಾಂಸದಂಗಡಿಗಳು ಹಾಗೂ ಕೋಳಿ ಅಂಗಡಿಗಳನ್ನು ಬಂದ್ ಮಾಡಿಸಿ ತಾಲೂಕು ಆಡಳಿತವು ಆದೇಶ ಹೊರಡಿಸಿತ್ತು.ಆದರೂ ಪಟ್ಟಣದ ಹೊರವಲಯದ ಮೈಸೂರು ರಸ್ತೆಯಲ್ಲಿರುವ ಅಮೀನ್ ಮಟನ್ ಸ್ಟಾಲ್ ನಲ್ಲಿ ನಾಲ್ಕೈದು ಕುರಿಗಳನ್ನು ಕಡಿದು ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮತ್ತು ಸಿಬ್ಬಂದಿ ದಾಳಿ