ಬೆಂಗಳೂರು : ದಕ್ಷಿಣ ಆಫ್ರಿಕಾ ಮೂಲದ ಒಬ್ಬರಿಗೆ ಮತ್ತು ಬೆಂಗಳೂರಿನ ವೈದ್ಯರೊಬ್ಬರಿಗೆ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು ಅವರೊಂದಿಗೆ ಪ್ರಾಥಮಿಕ ಸಂಪರ್ಕಹೊಂದಿದ್ದ ಇತರ 4 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಫ್ರಿಕಾ ಮೂಲದಿಂದ ಬಂದವರಿಗೆ ಪ್ರಯಾಣದ ಹಿನ್ನೆಲೆ ಇದ್ದು, ಅವರಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ಆದರೆ ಬೆಂಗಳೂರಿನ ವೈದ್ಯರಿಗೆ ಪ್ರಯಾಣ ಹಿನ್ನೆಲೆ ಇಲ್ಲ. ಆದರೂ ಪಾಸಿಟಿವ್ ಬಂದಿದೆ. ಈಗಾಗಲೇ ಇಬ್ಬರು