ತಬ್ಲಿಘಿ ಹಾಗೂ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯವರಿಂದ ಕಲಬುರಗಿಯಲ್ಲಿ ಕೊರೊನಾ ಸೋಂಕು ಕೇಸ್ ಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 67 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ. ಸೋಂಕಿತರಲ್ಲಿ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ 65 ಜನ, ಸೋಂಕಿತನೊಂದಿಗೆ ಸಂಪರ್ಕ ಹೊಂದಿದ ಒಬ್ಬರು ಹಾಗೂ ಇತರ ಕಾರಣದಿಂದ ಮತ್ತೊಬ್ಬರಿಗೆ ಕೊರೊನಾ ದೃಢವಾಗಿದೆ. ಇದರಿಂದ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 883 ಕ್ಕೆ ಏರಿದೆ. ಇದರಲ್ಲಿ