ಎಲ್ಲಾ ಜಿಲ್ಲೆಗಳಲ್ಲಿ ಕಡಿಮೆ ಅವಧಿ ಹಾಗೂ ಕಡಿಮೆ ವೆಚ್ಚದಲ್ಲಿ ಕೋವಿಡ್ 19 ಪರೀಕ್ಷೆ ನಡೆಸಲಾಗುತ್ತದೆ. ಈ ಕುರಿತು ಸರ್ಕಾರ ಸೂಕ್ತ ಕ್ರಮವಹಿಸುತ್ತಿದ್ದು, ಎಲ್ಲಾ ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಇದನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.ಕೊರೊನಾ ತಪಾಸಣೆ ಹಾಗೂ ಚಿಕಿತ್ಸೆಗೆ ಸುಧಾರಿತ ಕ್ರಮಗಳನ್ನು ಹಂತ ಹಂತವಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ಈ ವರೆಗೆ ಕೊರೋನಾ ಸೋಂಕು ತಡೆ ಹೋರಾಟಕ್ಕೆ ಎಲ್ಲರೂ ಪಕ್ಷಾತೀತವಾಗಿ ಬೆಂಬಲ ನೀಡಿದ್ದು ಮುಂದಿನ ಕೆಲವು ತಿಂಗಳೂ