ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಈ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರಿಗೂ ಕೋವಿಡ್ ದೃಢಪಡುತ್ತಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ತಮ್ಮ ಮನೆಯಲ್ಲಿಯೇ ಕ್ವಾರಂಟೈನ್ ಆಗಿರೋದಾಗಿ ಮಾಜಿ ಸಚಿವ ಪ್ರಿಯಾಂಕ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಇನ್ನು ತಮ್ಮ ನೇರ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ.