ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೊರೊನಾ ವಕ್ಕರಿಸಿದೆ. ಕೋವಿಡ್ – 19 ದೃಢಪಡುತ್ತಿದ್ದಂತೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಚಾಮರಾಜಪೇಟೆ ಶಾಸಕ ಹಾಗೂ ಮಾಜಿ ಸಚಿವರಾಗಿರುವ ಜಮೀರ್ ಅಹ್ಮದ್ ಖಾನ್ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡಿದ್ದರಿಂದಾಗಿ ಕೊರೊನಾ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ.