ಕೊರೊನಾ ವೈರಸ್ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ತಗುಲಿರುವುದು ನೋವಿನ ಸಂಗತಿ ಎಂದು ಸಚಿವರೊಬ್ಬರು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೋವಿಡ್- 19 ಸೋಂಕು ದೃಢವಾಗಿರುವುದು ನೋವಿನ ಸಂಗತಿ. ಅವರು ಶೀಘ್ರ ಗುಣಮುಖರಾಗಲಿ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹಾರೈಸಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ಪಾತ್ರ ಬಹುಮುಖ್ಯವಾಗಿದೆ. ಕೋವಿಡ್-19 ಸೋಂಕಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರಕ್ಕೆ