Widgets Magazine

SSLC ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೊನಾ

ಗದಗ| pavithra| Last Modified ಭಾನುವಾರ, 28 ಜೂನ್ 2020 (11:49 IST)
: SSLC ಪರೀಕ್ಷೆ ಬರೆದ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮುಂಡರಗಿ ತಾಲೂಕಿನ ಕಲಕೇರಿ ಪರೀಕ್ಷಾ ಕೇಂದ್ರದಲ್ಲಿ ಜೂನ್ 25ರಂದು ಮೊದಲ ಪರೀಕ್ಷೆ ಬರೆದು ವಿದ್ಯಾರ್ಥಿ ಮನೆಗೆ ಹೋಗುವಾಗ ಬೈಕ್ ಅಪಘಾತವಾಗಿ ಗಂಭೀರ ಗಾಯಗಳಾದ ಕಾರಣ ಗದಗದ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಹಾಗೇ ವಿದ್ಯಾರ್ಥಿಯ ಗಂಟಲು ದ್ರವವನ್ನು ಸಂಗ್ರಹಿಸಿ ಕೊವಿಡ್ ಟೆಸ್ಟ್ ಕಳುಹಿಸಲಾಗಿತ್ತು. ಅದರಲ್ಲಿ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಆತನ ಜೊತೆ ಪ್ರಾರ್ಥಮಿಕ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್ ಮಾಡಲು ಮುಂದಾಗಿದೆ.ಇದರಲ್ಲಿ ಇನ್ನಷ್ಟು ಓದಿ :