ಕೊರೊನಾ ಆತಂಕದ ನಡುವೆ ಆರಂಭಗೊಂಡಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಅಲ್ಲಲ್ಲಿ ಕೊರೊನಾ ಪಾಸಿಟಿವ್ ವರದಿಗಳು ಬರುತ್ತಿವೆ. ಬಳ್ಳಾರಿ ತಾಲೂಕಿನ ಕಪಗಲ್ ನ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಯ ವರದಿ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಈ ವಿದ್ಯಾರ್ಥಿಯೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ. ವೈರಸ್ ಪೀಡಿತ ವಿದ್ಯಾರ್ಥಿಗೆ ಚಿಕಿತ್ಸೆ ಮುಂದುವರಿದಿದೆ.