ಕೊರೊನಾ ವೈರಸ್ ಭೀತಿಯಿಂದಾಗಿ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಕೊರೋನಾ ಪಿಡುಗು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶದನ್ವಯ ಗದಗ ಜಿಲ್ಲೆಯಾದ್ಯಂತ ದಂಡ ಸಂಹಿತೆ ಪ್ರಕ್ರಿಯೆ 144 ರ ರೀತ್ಯ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ. ಕೊರೋನಾ ವೈರಸ್ ಹರಡದಂತೆ ಸಾರ್ವಜನಿಕ ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳುವಂತೆ ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶದಲ್ಲಿ ತಿಳಿಸಿದ್ದಾರೆ.ಗದಗ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ, ಕಾಲೇಜು ಹಾಗೂ ಕೋಚಿಂಗ್ ಸೆಂಟರ್ ಎಲ್ಲಾ ತರಹದ ಶಿಕ್ಷಣ ಸಂಸ್ಥೆಗಳಿಗೆ