Widgets Magazine

ಕೊರೊನಾ ವೈರಸ್ ; ಸರಕಾರದ ಆದೇಶ ಮೀರಿದರೆ ಜೈಲು ಸೇರೋದು ಪಕ್ಕಾ

ಕಾರವಾರ| Jagadeesh| Last Modified ಮಂಗಳವಾರ, 24 ಮಾರ್ಚ್ 2020 (17:23 IST)
ಕೊರೊನಾ ವೈರಸ್ ನಿಯಂತ್ರಣಕ್ಕೆ ಕಾಲ ಕಾಲಕ್ಕೆ ಸರ್ಕಾರ ನೀಡುವ ಸೂಚನೆ ಆದೇಶಗಳನ್ನು ಪಾಲಿಸಬೇಕು. ಇಲ್ಲದೇ ಇದ್ದಲ್ಲಿ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಪಕ್ಕಾ ಅಂತ ಡಿಸಿ ಎಚ್ಚರಿಕೆ ನೀಡಿದ್ದಾರೆ.

ಕಾರವಾರ ನಗರಸಭಾ ವ್ಯಾಪ್ತಿಯಲ್ಲಿರುವ ವ್ಯಾಪಾರಸ್ಥರಿಗೆ ಕೊರೋನಾ ವೈರಸ್ (ಕೋವಿಡ್-19) ಹರಡದಂತೆ ಮುಂಜಾಗ್ರತೆಗಾಗಿ ಮಾರ್ಚ್ 31 ರ ವರೆಗೆ ರಾಜ್ಯ ಸರ್ಕಾರದ ವತಿಯಿಂದ ಜಿಲ್ಲೆಯಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಕೇವಲ ಜೀವನೋಪಾಯದ ಅತ್ಯಾವಶ್ಯಕ ವಸ್ತುಗಳು ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ್ ಸೂಚಿಸಿದ್ದಾರೆ.

ದಂಡ ಪ್ರಕ್ರಿಯಾ ಸಂಹಿತೆ ಕಲಂ 144 ಜಾರಿಯಲ್ಲಿದ್ದು, ವ್ಯಾಪಾರಸ್ಥರು ಸಾಮಾಗ್ರಿಗಳ ದರಪಟ್ಟಿಯನ್ನು ಕಡ್ಡಾಯವಾಗಿ ಅಂಗಡಿಯ ಎದುರಿಗೆ ಸಾರ್ವಜನಿಕರಿಗೆ ಕಾಣುವಂತೆ ಪ್ರಕಟಿಸಬೇಕು. ವ್ಯಾಪಾರಸ್ಥರು ಮತ್ತು ಗ್ರಾಹಕರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು.  ಅಂಗಡಿಗಳಲ್ಲಿ ಸೆನಿಟೈಜರ್ ಬಳಕೆ, ಗ್ರಾಹಕರಲ್ಲಿ ಕನಿಷ್ಟ ಒಂದು ಮೀಟರ್ ಅಂತರ ಕಾಯ್ದುಕೊಳ್ಳಬೇಕು ಎಂದಿದ್ದಾರೆ.

ಕೆಮ್ಮು, ನೆಗಡಿ, ಜ್ವರ ಬಂದಂತವರನ್ನು ಅಂಗಡಿಯಲ್ಲಿ ನಿಲ್ಲಿಸಿಕೊಳ್ಳದೇ ಆಸ್ಪತ್ರೆಗೆ ಹೋಗಲು ತಿಳಿಸಬೇಕು. ಕಾಲ ಕಾಲಕ್ಕೆ ಸರ್ಕಾರ ನೀಡುವ ಸೂಚನೆ ಆದೇಶಗಳನ್ನು ಪಾಲಿಸದೇ ಇದ್ದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :