ಬೆಂಗಳೂರು: ಕೊರೊನಾ ಸೋಂಕು ವಿರುದ್ಧ ಹೋರಾಟದಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸಿದ ಆರೋಗ್ಯ ಕ್ಷೇತ್ರದ ಅಧಿಕಾರಿಗಳನ್ನು ಸ್ಥಳದಲ್ಲೇ ಸನ್ಮಾನಿಸುವ ಕೃತಜ್ಞಾ ವಾಹನಗಳಿಗೆ ನಟ ರಮೇಶ್ ಅರವಿಂದ್ ಚಾಲನೆ ನೀಡಿದರು. ವೈದ್ಯರು, ದಾದಿಯರು ಸೇರಿದಂತೆ ಆರೋಗ್ಯ ಕ್ಷೇತ್ರದ ವೃತ್ತಿಪರರು ಕೊರೊನಾ ಸಂದರ್ಭದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಇವರನ್ನು ಗುರುತಿಸುವ, ಸನ್ಮಾನಿಸುವ ಉದ್ದೇಶದಿಂದ ಕಾವೇರಿ ಆಸ್ಪತ್ರೆಯಿಂದ ಕೃತಜ್ಞಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ನಗರದ 300ಕ್ಕೂ ಹೆಚ್ಚು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ