ದೇಶದಲ್ಲಿ ಜೂನ್ ಮೂರನೇ ವಾರದಿಂದ ಅಕ್ಟೋಬರ್ ವರೆಗೂ ಕೊರೊನಾ ಸೋಂಕು ಹೆಚ್ಚಳವಾಗಬಹುದು ಎಂದು ಕಾನ್ಪುರ ಐಐಟಿ ವರದಿ ನೀಡಿದೆ ಎಂದು ರಾಜ್ಯ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಪ್ರಕಾರ ಜೂನ್ ಮೂರನೇ ವಾರದಿಂದ ಅಕ್ಟೋಬರ್ ವರೆಗೂ ಕೊರೊನಾ ಸೋಂಕು ಪರಿಸ್ಥಿತಿಯನ್ನು ನಾವೂ ಸೂಕ್ಷ್ಮವಾಗಿ ನೋಡುತ್ತಿದ್ದೇವೆ. ಅದಕ್ಕೆ ತಕ್ಕಂತೆ ಪೂರಕವಾಗಿ ಸಿದ್ದತೆ ಮಾಡಿಕೊಂಡಿದ್ದೇವೆ. ಈಗ ಬರುತ್ತಿರುವ ಕೋವಿಡ್ ಪ್ರಭೇದ ಸೌಮ್ಯ ಲಕ್ಷಣ ಇರುವುದರಿಂದ