ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಡಿಸಿ ಮುಂದಾಗಿದ್ದಾರೆ. ಕಲಬುರಗಿಯಿಂದ ಹೊರಹೋಗುವ ಮತ್ತು ಒಳಬರುವ ಎಲ್ಲಾ ಖಾಸಗಿ ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಬಿ.ಶರತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಖಾಸಗಿ ಟ್ರಾವೆಲರ್ಸ್ ಮತ್ತು ಬುಕ್ಕಿಂಗ್ ಏಜೆಂಟರ ಸಭೆಯಲ್ಲಿ ಅವರು ಕಟ್ಟಪ್ಪಣೆ ಮಾಡಿದರು.ರಾಜ್ಯದ ರಾಜಧಾನಿ ಬೆಂಗಳೂರು, ಇತರೆ ಜಿಲ್ಲೆಗಳು, ನೆರೆರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಿಗೆ ತೆರಳುವ ಮತ್ತು ಜಿಲ್ಲೆಯೊಳಗೆ ಬರುವ