ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ರಾಜ್ಯದಲ್ಲಿಯೂ ವೈರಸ್ ಪೀಡಿತರ ಸಂಖ್ಯೆ ಏರುತ್ತಿದೆ. ಕೋವಿಡ್ – 19 ನಿಂದಾಗಿ ರಾಜ್ಯದಲ್ಲಿ ಇದುವರೆಗೂ ಮೂವರು ಮೃತಪಟ್ಟಿದ್ದರೆ, 125 ಜನರಲ್ಲಿ ಸೋಂಕು ತಗುಲಿದೆ.ದೇಶದಲ್ಲಿ 2300 ಕ್ಕಿಂತ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, 56 ಜನರು ದೇಶದ ವಿವಿಧ ಭಾಗಗಳಲ್ಲಿ ವೈರಾಣುವಿನಿಂದಾಗಿ ಸಾವನ್ನಪ್ಪಿದ್ದಾರೆ.ಮಹಾರಾಷ್ಟ್ರ, ಕೇರಳ, ದೆಹಲಿ, ತಮಿಳುನಾಡು, ಕರ್ನಾಟಕದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ.