ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1564 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 59 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ 4775 ಮಂದಿ ಗುಣಮುಖಿತರಾಗಿದ್ದಾರೆ. ರಾಜ್ಯದಲ್ಲಿ 3 ತಿಂಗಳ ನಂತರ ಕನಿಷ್ಠ ಪ್ರಕರಣಗಳು ದೃಢಪಟ್ಟಂತಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,846ಕ್ಕೆ ಕುಸಿದಿದೆ. ರಾಜಧಾನಿ ಬೆಂಗಳೂರಿನಲ್ಲಿ 352 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು. 3 ಮಂದಿ ಮೃತಪಟ್ಟಿದ್ದಾರೆ.