ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2052 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 35 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಇಳಿಕೆಯಾಗಿದ್ದ ಸೋಂಕು ಪ್ರಮಾಣ ಮತ್ತೆ ಏರಿಕೆ ಕಂಡಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಲಾದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 506 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 9 ಮಂದಿ ಅಸುನೀಗಿದ್ದಾರೆ. ರಾಜ್ಯದಲ್ಲಿ ಒಂದೇ 1332 ಮಂದಿ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 257 ಮಂದಿ