ಕಲಬುರಗಿ : ರಾಜ್ಯದಲ್ಲೂ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಕಲಬುರಗಿ ನಗರದಲ್ಲಿ ವೃದ್ಧರೊಬ್ಬರಿಗೆ ಕೊರೊನಾ ವೈರಸ್ ತಗಲಿರುವ ಶಂಕೆ ವ್ಯಕ್ತವಾಗಿದೆ. ಫೆ.29ರಂದು ಸೌದಿ ಅರೇಬಿಯಾದಿಂದ ಬಂದಿದ್ದ ವೃದ್ಧ ಮಾರ್ಚ್ 5 ರಂದು ಜ್ವರ, ಕೆಮ್ಮು ಕಂಡುಬಂದ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ. ವೃದ್ಧನ ಗಂಟಲು ದ್ರವವನ್ನು ಸಂಗ್ರಹಿಸಿ ಬೆಂಗಳೂರಿನಲ್ಲಿರೋ ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್ ಗೆ