ಹೈದರಾಬಾದ್ ಮೂಲದ ವ್ಯಕ್ತಿಗೆ ಕೋರೋನಾ ಸೋಂಕು ದೃಢಪಟ್ಟ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದರಿಂದ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಹೀಗಂತ ಪಶು ಸಂಗೋಪಣೆ, ವಕ್ಫ ಮತ್ತು ಹಜ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಜಿಲ್ಲೆಯ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.ಹೈದರಾಬಾದ್ ರಾಜ್ಯವು ಬೀದರ್ ಜಿಲ್ಲೆಗೆ ಹತ್ತಿರವಾಗಿರುವುದರಿಂದ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ನಿತ್ಯ ವ್ಯಾಪಾರ ವಹಿವಾಟಿಗಾಗಿ ಪಕ್ಕದ ಜಿಲ್ಲೆಗೆ ತೆರಳುವುದು ಅನಿವಾರ್ಯವಾಗಿದೆ. ವ್ಯಕ್ತಿಯಿಂದ ವ್ಯಕ್ತಿಗೆ ಕೊರೊನಾ